Friday, 23 March 2018

92 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನಬಾರ್ಡ

92 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನಬಾರ್ಡ್

Published:March 16 2018, 12:19 [IST]
ಬೆಂಗಳೂರು, ಮಾರ್ಚ್ 16 : ನಬಾರ್ಡ್ 92 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಏಪ್ರಿಲ್ 2, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) 92 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
9 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಒಎಲ್
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು ಅಥವ ಶೇ 5ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಪಿಎಚ್‌ಡಿ ಅಥವ ಎರಡು ವರ್ಷದ ಪಿಜಿ ಡಿಪ್ಲಮಾವನ್ನು ಶೇ 50 ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 29 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/9/2018ಕ್ಕೆ ಅನ್ವಯವಾಗುವಂತೆ.

ವೇತನ ಶ್ರೇಣಿ : 28150 ರಿಂದ 55600 ರೂ.ಗಳು.
ಪ್ರಮುಖ ಅಂಶಗಳು
* ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್‌ನಲ್ಲಿ ಕೆಲಸ
* ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ
* ಒಟ್ಟು ಹುದ್ದೆಗಳು 92
* ಕೊನೆಯ ದಿನಾಂಕ ಏಪ್ರಿಲ್ 2

No comments:

Post a Comment